ಕ್ವಾರಂಟೈನ್ ಕೇಂದ್ರದಲ್ಲಿ ಯುವಕ ನೇಣು

 

ಬೀದರ್,ಮೇ.26-ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಹಾಕಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲ್ಲೂಕಿನ ವನಮಾರಪಳ್ಳಿಯಲ್ಲಿ ನಡೆದಿದೆ.

ನಾರಾಯಣಪುರ ಗ್ರಾಮದ ಸಚಿನ್ ಜಾಧವ್ (25) ಎಂಬ ಯುವಕನೆ ಕ್ವಾರಂಟೈನ್ ಕೇಂದ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸುದ್ದಿ ತಿಳಿದು ಔರಾದ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Share

Leave a Comment