`ಕ್ವಿಟ್ ಇಂಡಿಯಾ ಚಳುವಳಿ` ವಾರ್ಷಿಕೋತ್ಸವ: ಮೆರವಣಿಗೆ

ರಾಯಚೂರು.ಆ.09- ರಾಷ್ಟ್ರಪಿತಾ ಮಹಾತ್ಮಾ ಗಾಂಧೀಜಿಯವರು ಬ್ರಿಟೀಷರ ವಿರುದ್ಧ ಆರಂಭಿಸಿದ ಕ್ವಿಟ್ ಇಂಡಿಯಾ ಚಳುವಳಿಯ 76 ನೇ ವಾರ್ಷಿಕೋತ್ಸವ ನಿಮಿತ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಮೆರವಣಿಗೆ ಱ್ಯಾಲಿ ನಡೆಸಲಾಯಿತು.
ಜಿಲ್ಲಾ ಕ್ರೀಡಾಂಗಣ ಬಳಿ ಇರುವ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿದ ನಂತರ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಛೇರಿ ವರೆಗೆ ಬೃಹತ್ ಮೆರವಣಿಗೆ ಱ್ಯಾಲಿ ನಡೆಸಲಾಯಿತು. ಸ್ವಾತಂತ್ರ್ಯಕ್ಕಾಗಿ ಪಕ್ಷ ನಡೆಸಿದ ಹೋರಾಟ, ತ್ಯಾಗವನ್ನು ಜನರಿಗೆ ತಿಳಿಯಪಡಿಸಲಾಯಿತು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ವಸಂತ್ ಕುಮಾರ್, ಕಾರ್ಯದರ್ಶಿ ಯಂಕಣ್ಣ ಯಾದವ್, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಪಾರಸಮಲ್ ಸುಖಾಣಿ, ನಗರಸಭೆ ಉಪಾಧ್ಯಕ್ಷ ಜಯಣ್ಣ, ಜಿ.ಬಸವರಾಜ ರೆಡ್ಡಿ, ಜಿ.ಶಿವಮೂರ್ತಿ, ರುದ್ರಪ್ಪ ಅಂಗಡಿ, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಿ.ಸುರೇಶ್, ಅಸ್ಲಾಂ ಪಾಷಾ, ಎಂ.ಕೆ.ಬಾಬರ್, ಗ್ಯಾಸ್ ಸೀನು, ರಾಣಿ ರಿಚರ್ಡ್, ಬಾಬುರಾವ್, ತಾಯಣ್ಣ ನಾಯಕ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment