ಕ್ಷುಲ್ಲಕ ಕಾರಣಕ್ಕೆ ಜಗಳ :  ಇಬ್ಬರ ಕೊಲೆಯಲ್ಲಿ ಅಂತ್ಯ

ಮೈಸೂರು, ಮೇ.25:- ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಜಯಪುರ ಹೋಬಳಿಯಲ್ಲಿ ನಡೆದಿದೆ.
ಮೃತರನ್ನು ಟಿ.ಮಂಜುನಾಥ್, ಆರ್.ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇಬ್ಬರನ್ನು ಯೋಗೇಶ್ ಎಂಬಾತ ಕೊಲೆ ಮಾಡಿದ್ದಾನೆ. ಟಿ.ಮಂಜುನಾಥ್, ಆರ್.ಮಂಜುನಾಥ್ ಜಯಪುರ ಹೋಬಳಿಯ ಕೋಟೆ ಹುಂಡಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಯೋಗೇಶ್ ಎದುರಾಗಿದ್ದು, ಯಾವಾಗಲೋ ನಡೆದ ಹಳೆಯ ಘಟನೆಯ ಕುರಿತು ಮಾತಿಗೆ ಮಾತು ಬೆಳೆದಿದೆ. ಯೋಗೇಶ್ ತನ್ನ ಕೈಲಿದ್ದ ಡ್ರ್ಯಾಗರ್ ನಿಂದ ಟಿ.ಮಂಜುನಾಥ್, ಆರ್.ಮಂಜುನಾಥ್ ಇಬ್ಬರ ಮೇಲೂ ತೀವ್ರವಾಗಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಘಟನೆ ನಡೆಯುತ್ತಲೇ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಜಯಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕಾಗಮಿಸಿದ ಸಬ್ ಇನ್ಸಪೆಕ್ಟರ್ ಮೋಹನ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share

Leave a Comment