ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

 

ಕಲಬುರಗಿ,ಮೇ.16-ಚಿಂಚೋಳಿ ವಿಧಾನಸಭಾ ಉಪ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ವಾಹನ ದುರ್ಬಳಕೆ ಮಾಡಿಕೊಂಡಿದ್ದಾರೆ. ಪೈಲೆಟ್ ವಾಹನ ಬಳಕೆ ಮಾಡಿದ್ದಾರೆ. ಪೊಲೀಸ್ ವಾಹನದಲ್ಲಿ ಹಣ-ಹೆಂಡ ಸಾಗಿಸಿದ್ದಾರೆ ಎಂದು ಆರೋಪಿಸಿ ಶಾಸಕ ರಾಜೀವ್ ಕುಡಚಿ  ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಚುನಾವಣಾ ಅಧಿಕಾರಿಗಳು ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ಖರ್ಗೆ ಕುಟುಂಬ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿರುವ ಶಾಸಕ ರಾಜೀವ್ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ ಜಾಧವ ಜೊತೆಗೆ ತೆರಳಿ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

Leave a Comment