ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ : ದೇಶ ಕಂಡ ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಲತಾ ಮಂಗೇಶ್ಕರ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾನಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ಇಂದು ಬೆಳಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದು, ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಈವರೆಗೂ ಆಸ್ಪತ್ರೆ ವೈದ್ಯರು ಇನ್ನು ಲತಾ ಮಂಗೇಶ್ಕರ್ ಅವರ ಆರೋಗ್ಯದ ಕುರಿತು ವರದಿಯನ್ನು ನೀಡಿಲ್ಲ. ಸೆಪ್ಟೆಂಬರ್ ನಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಈ ವೇಳೆ ಬಾಲಿವುಡ್ ನ ಸೆಲಿಬ್ರಿಟಿಗಳುಶುಭಾಷಯ ಕೋರಿದ್ದರು . ಇತ್ತೀಚೆಗೆ ಲತಾ ಮಂಗೇಶ್ಕರ್ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು.

ಹೆಸರಾಂತ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಸಾವಿರಾರು ಹಾಡುಗಳನ್ನು ಹಾಡಿದ್ದು, ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ…

Leave a Comment