ಗಂಗಾಮತಸ್ಥ ಸಮಾಜ: ಅ.14 ಪ್ರತಿಭಾ ಪುರಸ್ಕಾರ-ಸನ್ಮಾನ

ರಾಯಚೂರು.ಅ.11- ಜಿಲ್ಲಾ ಗಂಗಾಮತಸ್ಥ ಸಮಾಜದಿಂದ 7 ನೇ ಪ್ರತಿಭಾ ಪುರಸ್ಕಾರ ಹಾಗೂ ನೂತನ ನಗರಸಭೆ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಅ.14 ರಂದು ಸ್ಥಳೀಯ ವೀರಶೈವ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆಂದು ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಸಮಾಜದ ಗುರುಗಳಾದ ಮಲ್ಲಿಕಾರ್ಜುನ ದೇವರು ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೇರಿದಂತೆ ಇತರೆ ಗಣ್ಯಾತಿಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಳೆದ 7 ವರ್ಷಗಳಿಂದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಮೂಲಕ ಮುಂದಿನ ಉನ್ನತ ಶಿಕ್ಷಣಕ್ಕೆ ಪ್ರೇರೇಪಿಸುವ ಕಾರ್ಯ ಮಾಡಲಾಗುತ್ತಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ, ಪ್ರಮಾಣ ಪತ್ರ, ಶೀಲ್ಡ್ ನೀಡಲಾಗುತ್ತದೆ. ಈ ಬಾರಿ 400 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಈಗಾಗಲೇ 200 ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಮುಂದಿನ 2 ದಿನಗಳಲ್ಲಿ ಇನ್ನು ಹೆಚ್ಚು ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದೆಂದರು.
ಇದೇ ಸಂದರ್ಭದಲ್ಲಿ ಸಮಾಜದ ನೂತನ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಜಿಂದಪ್ಪ, ಲಲಿತಾ ಕಡಗೋಳ್ ಆಂಜಿನೇಯ್ಯ ಅವರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ. ಸಮಾಜದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಧನ ಸಹಾಯ ಮಾಡಿ, ಶಿಕ್ಷಣಕ್ಕೆ ಪ್ರೋತ್ಸಾಹಿಸಲಾಗುತ್ತದೆ. ಈಗಾಗಲೇ ಸ್ಥಳೀಯ ಕೆ.ಎಸ್‌.ಆರ್.ಟಿ. ಡಿಪೋ ಬಳಿ ಸಮಾಜದಿಂದ ಸ್ವಂತ ವಸತಿ ನಿಲಯ ಆರಂಭಿಸಲಾಗಿದ್ದು, 14 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 6 ಕೋಠಡಿಗಳಿವೆ. 4 ಕೊಠಡಿ ಕಾಮಗಾರಿ ಪ್ರಗತಿಯಲ್ಲಿವೆ ಎಂದರು. ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಕಲ್ಮಾಲ ಶರಣಪ್ಪ, ಬಸವರಾಜ, ನಾರಾಯಣ, ನರಸಪ್ಪ, ಕಡಗೋಳ್ ಶರಣಪ್ಪ, ಕಡಗೋಳ್ ರಾಮಚಂದ್ರ, ಬಿ.ಕೃಷಅಣಮೂರ್ತಿ, ನಾಗೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment