ಗಂಟಲು ದ್ರವ ಸಂಗ್ರಹಕ್ಕೆ 20 ಕೇಂದ್ರ ಆರಂಭ

ತುಮಕೂರು, ಜೂ. ೩೦- ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲ್ಲೂಕುಗಳಲ್ಲಿ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸುವ 20 ಕೇಂದ್ರಗಳನ್ನು ಆರಂಭಿಸಲಾಗಿದೆ.

ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ ಇದ್ದರೆ ಅಂತಹ ರೋಗಿಗಳು ಈ ಕೇಂದ್ರಗಳಲ್ಲಿ ಗಂಟಲು ಮತ್ತು ಮೂಗಿನ ಸ್ರಾವದ ಮಾದರಿಯನ್ನು ಪರೀಕ್ಷೆಗೆ ಕೊಡಬಹುದು. ಇಲ್ಲಿ ಉಚಿತವಾಗಿ ಮಾದರಿ ಸಂಗ್ರಹ ಮಾಡಲಾಗುತ್ತದೆ.

ಕೊರೊನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ನಾಗರಿಕರು ಅನಾರೋಗ್ಯದ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್ ತಿಳಿಸಿದ್ದಾರೆ.

ತುಮಕೂರು, ಪಾವಗಡ, ಸಿರಾದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಮುಂದೆ ಮತ್ತಷ್ಟು ಹೆಚ್ಚಳವಾಗುತ್ತವೆ. ಜನರು ಈ ಬಗ್ಗೆ ಎಚ್ಚರ ವಹಿಸಬೇಕು. ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿನಿಂದ ಈವರೆಗೆ 5 ಮಂದಿ ಸಾವನ್ನಪ್ಪಿದ್ದಾರೆ. ಈ ಸಾವಿನ ಪ್ರಕರಣಗಳನ್ನು ಅವಲೋಕಿಸಿದಾಗ ಇವರು ತಡವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿಯೂ ಸಾವು ಸಂಭವಿಸಿದೆ. ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದರೆ ಗಂಟಲು ಸ್ರಾವ ಪರೀಕ್ಷೆಗೆ ಒಳಪಡಬೇಕು. ಇದು ಉಚಿತ ಪರೀಕ್ಷೆ ಎಂದು ಅವರು ಹೇಳಿದ್ದಾರೆ.

Share

Leave a Comment