ಗಬ್ಬೂರು : ಶಿಕ್ಷಕರ ದಿನಾಚರಣೆ

ರಾಯಚೂರು.ಸೆ.07- ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಕಮಲ್ ಸಂಪತಕುಮಾರಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ರೆಡ್ಡಿ ಪ್ರೇಮಲತಾ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತದೆಂದರು. ಶಂಕರ್ ಮಾತನಾಡಿ, ದಾಸ ಸಾಹಿತ್ಯಕ್ಕೆ ದೇವದುರ್ಗ ತಾಲೂಕು ನೀಡಿರುವ ಕೊಡುಗೆ ಅನನ್ಯವೆಂದರು. ಜಗದೀಶ್ ಹೆಚ್ ಮಾತನಾಡಿ, ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ದೇವದಾಸ, ತಿರುಪತಿ, ಕೃಷ್ಣಬಾಯಿ ಇತರರು ಮಾತನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment