ಗಾಂಜಾ ಕಳ್ಳಸಾಗಾಣಿಕೆ : ಇಬ್ಬರ ಬಂಧನ

ಹೈದರಾಬಾದ್, ಜೂನ್ 15 -ಹೈದರಾಬಾದ್ ವಲಯದ ಕಂದಾಯ ನಿರ್ದೇಶನಾಲಯದ ಅಧಿಕಾರಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಅವರಿಂದ ಸುಮಾರು 1.88 ಕೋಟಿ ರೂ.ಗಳ ಮೌಲ್ಯದ 944 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ನಿಷೇಧಿತ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ , ಕಂದಾಯ ನಿರ್ದೇಶನಾಲಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರಾಮೋಜಿ ಚಿತ್ರ ನಗರಿ ಕಡೆಯಿಂದ ಬರುತ್ತಿದ್ದ ಸರಕು ಲಾರಿಯನ್ನು ತಡೆದು ಪರಿಶೀಲಿಸಿದಾಗ 944 ಕೆಜಿ ಗಾಂಜಾ ಪತ್ತೆ ಯಾಗಿದೆ ಎಂದು ಡಿಆರ್‌ಐ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ .

ಸರಕು ಲಾರಿನಲ್ಲಿ ಮಾದಕ ವಸ್ತುಗಳನ್ನು ತೆಂಗಿನಕಾಯಿಗಳ ಅಡಿಯಲ್ಲಿಟ್ಟು ಸಾಗಾಣಿಕೆ ಮಾಡಲಾಗುತ್ತಿತ್ತು . ಭದ್ರಾಚಲಂ (ಆಂಧ್ರ-ತೆಲಂಗಾಣ ಗಡಿ) ಬಳಿಯ ಹಳ್ಳಿಯಿಂದ ಗಾಂಜಾವನ್ನು ತರಲಾಗುತ್ತಿತ್ತು ಎಂದು ಹೇಳಲಾಗಿದೆ.

ನಾರ್ಕೋಟಿಕ್ ಡ್ರಗ್ಸ್ (ಎನ್‌ಡಿಪಿಎಸ್) ಕಾಯ್ದೆ, 1085 ರ ಅಡಿಯಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು 1.88 ಕೋಟಿ ರೂಪಾಯಿ ಎನ್ನಲಾಗಿದೆ.
ಸರಕು ಲಾರಿ ವಶಪಡಿಸಿಕೊಳ್ಳುವುದರ ಜೊತೆಗೆ, ಗಾಂಜಾದ ಅಕ್ರಮ ಸಾಗಣೆಯಲ್ಲಿ ಭಾಗಿಯಾಗಿರುವ ಚಾಲಕ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

Leave a Comment