ಗಾಂಜಾ ಮಾರಾಟ ಆರೋಪಿ ಸೆರೆ

ಬೆಂಗಳೂರು, ಸೆ. ೭- ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 2 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಶಿಡ್ಲಘಟ್ಟದ ಆಜಾದ್ ನಗರದ ಮೌಲಾ ಅಲಿಯಾಸ್ ಸೈಯದ್ ಮೌಲಾ (35) ಬಂಧಿತ ಆರೋಪಿಯಾಗಿದ್ದಾನೆ. ಈತನ ಜೊತೆ ಗಾಂಜಾ ಮಾರಾಟದಲ್ಲಿ ತೊಡಗಿ ತಲೆಮರೆಸಿಕೊಂಡಿರುವ ಶಿಡ್ಲಘಟ್ಟದ ಷರೀಫ್‌ಗಾಗಿ ತೀವ್ರ ಶೋಧ ನಡೆಸಲಾಗಿದೆ.
ಬಂಧಿತ ಮೌಲಾನಾನಿಂದ 80 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ, ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯು ದೇವನಹಳ್ಳಿಯ ವಿಜಯಪುರ ಸರ್ಕಲ್ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಚಿಕ್ಕಬಳ್ಳಾಪುರದಿಂದ ಗಾಂಜಾ ಖರೀದಿಸಿಕೊಂಡು ಬಂದು ಷರೀಫ್ ಜೊತೆ ಸೇರಿ ನಗರದ ಹೊರವಲಯದ ಪ್ರದೇಶಗಳಲ್ಲಿ ಸಂಚರಿಸುತ್ತಾ, ಹೆಚ್ಚಿನ ಬೆಲೆಗೆ ಗಾಂಜಾ ಮಾರಾಟ ಮಾಡುತ್ತಿರುವುದು ವಿಚಾರಣೆಯಲ್ಲಿ ಕಂಡುಬಂದಿದೆ.

Leave a Comment