ಗಾಂಜಾ ಸಾಗಾಟ: ಇಬ್ಬರ ಸೆರೆ

ಮಂಗಳೂರು, ಫೆ.೧೭- ಕೇರಳದಿಂದ ನಗರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕಾಪಿಕಾಡ್ ರಸ್ತೆಯ ಸುರಭಿ ಹೊಟೇಲ್ ಮುಂಭಾಗದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ಅಂಸಾದ್ ಸಿ.ಎಚ್. ಹಾಗೂ ಉದಯ ಕುಮಾರ್ ರೈ ಎಂದು ಹೆಸರಿಸಲಾಗಿದೆ.

ಆರೋಪಿಗಳಿಂದ ೫ ಕೆಜಿ ಗಾಂಜಾ, ೩ ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು ೧,೬೬,೦೦೦ ರು. ಮೌಲ್ಯದ ಸರಕನ್ನು ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ಆರೋಪಿಗಳು ಕೇರಳ ಇಡುಕ್ಕಿ ಜಿಲ್ಲೆಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿದ್ದರು. ಆರೋಪಿಗಳ ಪೈಕಿ ಉದಯ ಕುಮಾರ್ ರೈ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಮಂಗಳೂರು ಪೂರ್ವ, ಬರ್ಕೆ, ಬಜ್ಪೆ ಪೊಲೀಸ್ ಠಾಣೆಗಳಲ್ಲಿ ಹಾಗೂ ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು ೬ ಪ್ರಕರಣಗಳು ದಾಖಲಾಗಿವೆ. ಸಿಸಿವಿ ಪೊಲೀಸರು ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಗಾಂಜಾವನ್ನು ಮುಂದಿನ ಕ್ರಮಕ್ಕಾಗಿ ಉರ್ವಾ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Leave a Comment