ಗಾಣಗಪುರಕ್ಕೆ ಗೌಡರ ಭೇಟಿ ವಿಶೇಷ ಪೂಜೆ ಸಲ್ಲಿಕೆ

ಕಲ್ಬುರ್ಗಿ, ನ ೧೧- ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳು ಕಡಿಮೆಯಾಗಿ ಶಾಂತಿ, ಸಹಬಾಳ್ವೆ ಮೂಡಿ ಸೌಹಾರ್ದತೆಯ ವಾತಾವರಣ ನಿರ್ಮಾಣವಾಗುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಇಂದಿಲ್ಲಿ ಹೇಳಿದ್ದಾರೆ.
ಜನರ ಬದುಕು ಹಸನಾಗಿ ಎಲ್ಲರು ಪ್ರೀತಿಯ ವಾತಾವರಣದಲ್ಲಿ ಬದುಕುವಂತಾಗಬೇಕು ಎಂದು ಗುರುದತ್ತನ ಪಾದುಕೆಗಳಿಗೆ ಪೂಜೆ ಸಲ್ಲಿಸಿರುವುದಾಗಿ ಅವರು ಹೇಳಿದರು.
ಜಿಲ್ಲೆಯ ಗಾಣಗಪುರ ದತ್ತ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ಅತ್ಯಂತ ಪುಣ್ಯ ಕ್ಷೇತ್ರ, ೫೦ ವರ್ಷಗಳ ಹಿಂದೆ ಇಲ್ಲಿಗೆ ಬಂದಿದೆ. ಈಗ ಮತ್ತೊಮ್ಮೆ ಬಂದು ಪೂಜೆ ಸಲ್ಲಿಸಿದ್ದೇನೆ ಎಲ್ಲರಿಗೂ ಒಳಿತಾಗಲಿ ಎಂದು ಬೇಡಿಕೊಂಡಿರುವುದಾಗಿ ಅವರು ತಿಳಿಸಿದರು.
೬೦ ವರ್ಷಗಳ ರಾಜಕೀಯ ಜೀವನದಲ್ಲಿ ಅನೇಕ ಹೋರಾಟಗಳನ್ನು ಮಾಡಿದ್ದೇನೆ. ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಅವರು ತಿಳಿಸಿದರು.
ಕಲ್ಬುರ್ಗಿ ಜಿಲ್ಲೆಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅವರೊಂದಿಗೆ ಎಲ್ಲರು ಸಹಕರಿಸಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಅವರು ಹೇಳಿದರು.

Leave a Comment