ಗುಂಡಿಕ್ಕಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ, ಸೆ. ೧೧-ಕಣಿವೆ ರಾಜ್ಯ ಜಮ್ಮು-ಕಾಶ್ಚೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಗಡಿಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಿವೆ.
ಹತ ಉಗ್ರರು ಯಾವ ಸಂಘಟನಗೆ ಸೇರಿದ್ದಾರೆಂಬ ವಿವರಗಳು ನಿಖರವಾಗಿ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಲೂರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆ ಮಾಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಪ್ರದೇಶದಲ್ಲಿ ಶೋಧನಾ ಕಾಂii ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment