ಗುಜರಾತ್ ರಾಜ್ಯಸಭಾ ಚುನಾವಣೆ ವಿವಾದ; ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

 

ನವದೆಹಲಿ, ಜೂ 18 – ಗುಜರಾತ್ ನ ಎರಡು ರಾಜ್ಯಸಭಾ ಸ್ಥಾನಗಳಿಗೆ ಜುಲೈ 5ರಂದು ಪ್ರತ್ಯೇಕ ಉಪಚುನಾವಣೆಗಳನ್ನು ನಡೆಸುವ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ.
ಬಿಜೆಪಿ ನಾಯಕರಾದ ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವುದರಿಂದ ತೆರವಾಗಿರುವ ಗುಜರಾತ್ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಪ್ರತ್ಯೇಕ ಉಪ ಚುನಾವಣೆ ನಡೆಸುವ ಅಗತ್ಯವಿಲ್ಲ, ಬದಲಿಗೆ ಒಟ್ಟಾಗಿ ಚುನಾವಣೆ ನಡೆಸುವಂತೆ ಕೋರಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಾದ ಪರೇಶ್ ಭಾಯ್ ಧನಾನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಇಂದು ಅರ್ಜಿ ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರಿದ್ದ ನ್ಯಾಯಪೀಠ, ‘ಇದು ಮಹತ್ವದ ಪ್ರಕರಣವಾಗಿದ್ದು, ಬುಧವಾರ ವಿಚಾರಣೆ ನಡೆಸುತ್ತೇವೆ’ ಎಂದಿತು.
ಬಿಜೆಪಿ ಪ್ರತ್ಯೇಕ ಚುನಾವಣೆ ನಡೆಸುವ ಮೂಲಕ ರಣತಂತ್ರ ರೂಪಿಸಲು ಸಜ್ಜಾಗಿದೆ. ಇದು ಪ್ರಜಾಪ್ರಭುತ್ರದ ಕಗ್ಗೊಲೆ ಎಂದು ಧನೋನಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.

Leave a Comment