ಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಧರಣಿ

ರಾಯಚೂರು.ಮಾ.20- ಸರ್ಕಾರದ ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿ ಹುಬ್ಬಳ್ಳಿ ಇಂದು ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿತು.

ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಸುಪ್ರೀಂಕೋರ್ಟ್ ಆದೇಶದನ್ವಯ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕಳೆದ 15 ವರ್ಷಗಳಿಂದ ಸರ್ಕಾರ ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಅನುಭವದ ಮೇರೆಗೆ ಖಾಯಂಗೊಳಿಸಬೇಕು. ಗುತ್ತಿಗೆ ನೌಕರರಿಗೆ ಭವಿಷ್ಯನಿಧಿ, ಇಎಸ್ಐ ಸೌಲಭ್ಯ ಕಲ್ಪಿಸಬೇಕು ಸೇರಿ ಇನ್ನಿತರ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿ.ಜಿ.ಅಂಗಡಿ, ನೀಲಮ್ಮ, ಸಿದ್ದಲಿಂಗಸ್ವಾಮಿ, ವಿಜಯಲಕ್ಷ್ಮೀ, ಶಂಕರ್ ಸೇರಿದಂತೆ ನೂರಾರು ನೌಕರರು ಉಪಸ್ಥಿತರಿದ್ದರು.

Leave a Comment