ಗೃಹ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಶರತ್ ಬಚ್ಚೇಗೌಡ

ಹೊಸಕೋಟೆ.ಅ.೯.ಉಪಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಸ್ಥಾನವನ್ನು ತಮಗೆ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ತಮಗೆ ಈ ಹುದ್ದೆ ಬೇಡ ಎಂದು ಶರತ್ ಬಚ್ಚೇಗೌಡ ತಿಳಿಸಿದ್ದಾರೆ.

ಹೊಸಕೋಟೆಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನನಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆಂಬ ವಿಚಾರ ಮಾಧ್ಯಮಗಳಿಂದಷ್ಟೇ ಗೊತ್ತಾಗಿದೆ. ನಾನು ಗೃಹ ಮಂಡಳಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ, ನಾನು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಪಕ್ಷ ಒಂದು ವೇಳೆ ಟಿಕೆಟ್ ನೀಡಿದ್ದರೆ, ನನ್ನದೇ ನಿರ್ಧಾರ ಕೈಗೊಳ್ಳುವುದಾಗಿ’ ಶರಚ್ ಬಚ್ಚೇಗೌಡ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಹೊಸಕೋಟೆಯಲ್ಲಿ ಈಗಾಗಲೇ ಶರತ್ ಬಚ್ಚೇಗೌಡ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷದಿಂದ ಟಿಕೆಟ್ ಸಿಗದಿದ್ದರೂ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಬಹಿರಂಗವಾಗಿ ಚಾಲೆಂಜ್ ಮಾಡಿದ್ದರು. ಇದರೊಂದಿಗೆ ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡ ನಡುವೆ ವಾಕ್ಸಮರವೂ ತಾರಕಕ್ಕೇರಿದೆ. ಉಪಚುನಾವಣೆಗೂ ಮುನ್ನವೇ ಪಕ್ಷದಲ್ಲಿ ಶರತ್ ಬಚ್ಚೇಗೌಡ ಬಂಡಾಯದ ಬಾವುಟ ಹಾರಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ತಂತ್ರವನ್ನು ರೂಪಿಸಿದರು. ಅದರಂತೆ ಶರತ್ ಬಚ್ಚೇಗೌಡ ಅವರಿಗೆ ಕರ್ನಾಟಕ ಗೃಹಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ, ಇದಕ್ಕೆ ಒಪ್ಪದ ಶರತ್ ಬಚ್ಚೇಗೌಡ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ…

Leave a Comment