ಗೋಡ್ಸೆ ಭಯೋತ್ಪಾದಕ ಹೇಳಿಕೆ ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆತ

ಚೆನ್ನೈ, ಮೇ ೧೬- ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಎಂದು ಹೇಳಿಕೆ ನೀಡಿದ್ದ ಚಿತ್ರನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ಎಸೆದು ಹಲ್ಲೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಮಧುರೈನ ತಿರುಪಕರನ್ ಕುಂದರಂ ವಿಧಾನಸಭೆ ಉಪಚುನಾವಣೆಗೆ ನಿನ್ನೆ ರಾತ್ರಿ ಪ್ರಚಾರ ನಡೆಸುತ್ತಿದ್ದ ವೇಳೆ ಕಮಲ್ ಹಾಸನ್ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಹಾಗೂ ಹನುಮಸೇನಾ ಕಾರ್ಯಕರ್ತರು,  ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ.

ಇತ್ತೀಚೆಗಷ್ಟೇ ಪಕ್ಷದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ  ಕಮಲ್ ಹಾಸನ್, ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಹಿಂದೂ ಭಯೋತ್ಪಾದಕ ಎಂದು ಆರೋಪಿಸಿದ್ದರು. ಕಮಲ್ ಹಾಸನ್ ಹೇಳಿಕೆಗೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು.

Leave a Comment