ಗೌಡರ ಜತೆ ಮಾತಿಲ್ಲ, ಕಥೆಯಿಲ್ಲ ಬಿಎಸ್‌ವೈ

ಬೆಂಗಳೂರು, ನ. ೬- ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂಬ ವರದಿಯನ್ನು ನಿರಾಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪರವರು ದೇವೇಗೌಡರು ಫೋನ್ ಮಾಡಿದ್ದರು ಎಂಬುದು ಸತ್ಯಕ್ಕೆ ದೂರುವಾದದ್ದು ಎಂದು ಹೇಳಿದ್ದಾರೆ ಎಂದರು.
ಮಾಜಿ ಪ್ರಧಾನಿಯಾಗಿರುವ ದೇವೇಗೌಡರಿಗೆ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತೀರ್ಮಾನ ಮಾಡುವ ಶಕ್ತಿ ಸಾಮರ್ಥ್ಯವಿದೆ. ನಾನು ಯಾವುದೇ ಸಂದರ್ಭದಲ್ಲೂ ದೇವೇಗೌಡರ ಹೆಸರನ್ನು ಪ್ರಸ್ತಾಪಿಸಿಲ್ಲ ಎಂದರು.
ಮಾಜಿ ಪ್ರಧಾನಿ ದೇವೇಗೌಡರು ತಮಗೆ ದೂರವಾಣಿ ಕರೆ ಮಾಡಿ ಸರ್ಕಾರ ಸ್ಥಿರವಾಗಿರುತ್ತದೆ ಎಂದು ಅಭಯ ನೀಡಿದ್ದಾರೆ ಎಂಬ ವರದಿಗಳು ನಿರಾಧಾರ ಎಂದು ಡಾಲಱ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ಯಾದಗಿರಿಯ ಸಬ್‌ಇನ್ಸ್‌ಪೆಕ್ಟರ್ ಅವರನ್ನು ವರ್ಗಾಯಿಸದಿದ್ದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಎಚ್ಚರಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು,ಯಾದಗಿರಿ ಸಬ್‌ಇನ್ಸ್‌ಪೆಕ್ಟರ್ ಅವರನ್ನು ರಜೆಯ ಮೇಲೆ ಕಳುಹಿಸುವಂತೆ ಸೂಚನೆ ನೀಡಿದ್ದೇನೆ.
ದೇವೇಗೌಡರು ಹೇಳಿದಂತೆ ಕ್ರಮಕೈಗೊಳ್ಳುತ್ತೇನೆ. ಇದಕ್ಕೆ ದೇವೇಗೌಡರು ಒಪ್ಪಿಕೊಳ್ಳುವ ವಿಶ್ವಾಸವೂ ಇದೆ ಎಂದು ಅವರು ಹೇಳಿದರು. ಯಾದಗಿರಿಯ ಸಬ್‌ಇನ್ಸ್‌ಪೆಕ್ಟರ್ ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯಮಾಡಿದ್ದಾರೆಂದು ದೇವೇಗೌಡರು ಪ್ರತಿಭಟನೆ ನಡೆಸಿ ಸಬ್‌ಇನ್ಸ್‌ಪೆಕ್ಟರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದರು, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಬ್‌ಇನ್ಸ್‌ಪೆಕ್ಟರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದರು.
ಅನರ್ಹ ಶಾಸಕ ನಾರಾಯಣಗೌಡ ಅವರು ರಾಜೀನಾಮೆಗೂ ಮುನ್ನ ಯಡಿಯೂರಪ್ಪನವರನ್ನು ಭೇಟಿ ಮಾಡಿ ಚರ್ಚಿಸಿದ್ದೇ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರಾಕರಿಸಿದರು.

Leave a Comment