ಗ್ಯಾಸ್ ಟ್ಯಾಂಕರ್ ಪಲ್ಟಿ: ಅನಿಲ ಸೋರಿಕೆ

ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ, ಪರಿಸರವಾಸಿಗಳ ಸ್ಥಳಾಂತರ

ಕಾಸರಗೋಡು, ಅ.೧೬೫- ಇಂದು ಮುಂಜಾನೆ ರಾ.ಹೆ.ಯ ಅಡ್ಕತ್ತಬೈಲ್ ಎಂಬಲ್ಲಿ ಮಂಗಳೂರಿನಿಂದ ಗ್ಯಾಸ್ ಸರಬರಾಜು ಮಾಡುತ್ತಿದ್ದ ಬುಲೆಟ್ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ಮಗುಚಿಬಿದ್ದ ಘಟನೆ ನಡೆದಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಲಾಗಿದ್ದು ಪರಿಸರವಾಸಿಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಅನಿಲ ಸೋರಿಕೆಯಿಂದ ಸಂಭಾವ್ಯ ಅನಾಹುತ ಘಟಿಸದಂತೆ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸಲಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಅನಿಲ ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ವಾಹನಗಳನ್ನು ಬದಲಿ ರಸ್ತೆಯಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಅಡ್ಕತ್ತಬೈಲ್ ಶಾಲೆಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

Leave a Comment