ಚಂದನ್ ನಿವೇದಿತಾ ಹನಿಮೂನ್ ಕೊರೊನಾ ತಪಾಸಣೆಗೆ ಒತ್ತಾಯ

ಮೈಸೂರು, ಮಾ ೧೩- ಬಿಗ್ ಬಾಸ್ ಖ್ಯಾತಿಯ ನೂತನ ದಂಪತಿಗಳಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹನಿಮೂನ್‌ಗಾಗಿ ಇಟಲಿಗೆ ತೆರಳಿದ್ದು, ಅವರು ಮೈಸೂರಿಗೆ ಆಗಮಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೊರೊನಾ ವೈರಸ್ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಅಧ್ಯಕ್ಷ ರಫಿಕ್ ಆಲಿ ಮನವಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹವಾಗಿದ್ದು ಹನಿಮೂನ್‌ಗಾಗಿ ಇಟಲಿಗೆ ತೆರಳಿದ್ದಾರೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ಸಂದರ್ಭದಲ್ಲಿ ಸೆಲೆ ಬ್ರಿಟಿಗಳು ಎಂಬ ಕಾರಣದಿಂದ ಅವರಿಗೆ ತಪಾಸಣೆಗೆ ಒಳಪಡಿಸದೇ ನಿರ್ಲಕ್ಷಿಸಬಾರದು. ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಅವರನ್ನು ತಪಾಸಣೆಗೆ ಒಳಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಇಟಲಿಯಲ್ಲಿ ಈಗಾಗಲೇ ಶೇ. 75 ರಷ್ಟು ಭಾಗ ಭಯಾನಕ ಕೊರೊನಾ ಆವರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಈ ಪತ್ರ ಬರೆಯಲಾಗಿದೆ. ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಇವರನ್ನು ತಪಾಸಣೆಗೆ ಒಳಪಡಿಸುವುದು ಒಳ್ಳೆಯದು ಎಂದು ತಿಳಿಸಿದ್ದಾರೆ.

Leave a Comment