ಚಕ್ರವ್ಯೂಹದಲ್ಲಿ ಸಿಲುಕಿದೆ: ಸೋಲಿನ ರಹಸ್ಯ ಬಿಚ್ಚಿಟ್ಟ ದೇವೇಗೌಡರು

ಬೆಂಗಳೂರು.ನ.8.ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿ ಸೋತೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ತುಮಕೂರು ತಾಲೂಕಿನ ಅರೇಹಳ್ಳಿಯಲ್ಲಿ ಮಾತನಾಡಿದ ಅವರು, ನಾನು ಶಸ್ತ್ರ ತ್ಯಾಗ ಮಾಡುವುದಿಲ್ಲ. ಶಸ್ತ್ರಸಜ್ಜಿತನಾಗಿಯೇ ಹೋರಾಟ ನಡೆಸಿ ಪಕ್ಷವನ್ನು ಕಟ್ಟುತ್ತೇನೆ ಎಂದು ಹೇಳಿದ್ದಾರೆ.
59 ವರ್ಷ ರಾಜಕಾರಣ ಮಾಡಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ವಿಧಿ ಚಕ್ರವ್ಯೂಹದಲ್ಲಿ ಸಿಲುಕಿಸಿ ಸೋಲಿಸಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಎಲ್ಲಾ 11 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದ ಅವರು, ಪುತ್ರನನ್ನು ಮುಖ್ಯಮಂತ್ರಿ ಮಾಡಿ ಎಂದು ನಾನು ಯಾರ ಮನೆಗೆ ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ.

Leave a Comment