ಚಲನಚಿತ್ರ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ

ರಾಜ್ಯದಲ್ಲಿ ಅನ್ ಲಾಕ್ 1.0 ಆರಂಭವಾಗಿರುವ ಹಿನ್ನೆಲೆಯಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ಅವಕಾಶ ನೀಡುವ ಮೂಲಕ ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ ನೀಡಿದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಆದಾಗಿನಿಂದ ಚಲನಚಿತ್ರ ಚಿತ್ರೀಕರಣಕ್ಕೆ ಪೂರ್ಣ ವಿರಾಮ ನೀಡಲಾಗಿತ್ತು. ಇತ್ತೀಚೆಗೆ ಸರ್ಕಾರ ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ‌ ನೀಡಿತ್ತು.
ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡು‌ ಚಲನಚಿತ್ರ ಸೇರಿ ಧಾರವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಲಾಕ್‌ಡೌನ್ ನಿಂದಾಗಿ ಅರ್ಧದಲ್ಲೇ ಸ್ಥಗಿತಗೊಂಡ ಎಲ್ಲಾ ಚಲನಚಿತ್ರ,‌ ಟಿವಿ ಚಿತ್ರೀಕರಣ ಸೇರಿ ಎಲ್ಲಾ ಚಿತ್ರೀಕರಣದ ನಂತರದ ಕೆಲಸಗಳನ್ನು ಮುಂದುವರೆಸುವಂತೆ ಆದೇಶ ಹೊರಡಿಸಲಾಗಿದೆ.
ಇನ್ನು, ಕೋವಿಡ್-19 ಸಂಬಂಧವಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ

Share

Leave a Comment