ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು

 

ಕಲಬುರಗಿ,ಜ.22-ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿದ್ದು, ಕೂದಲೆಳೆಯ ಅಂತರದಲ್ಲಿ ಅನಾಹುತ ತಪ್ಪಿದ ಘಟನೆ ನಗರ ಹೊರವಲಯದ ರಾಜಾಪುರ ರಿಂಗ್ ರಸ್ತೆಯಲ್ಲಿಂದು ನಡೆದಿದೆ.

ರಾಮಮಂದಿರ ಕಡೆಯಿಂದ ಖರ್ಗೆ ಪೆಟ್ರೋಲ್ ಬಂಕ್ ಕಡೆಗೆ ಹೋಗುತ್ತಿದ್ದ ಸ್ಪಿಫ್ಟ್ ಡಿಸೈರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆದ ಡಿವೈಡರ್ ಗೆ ಗುದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುದ್ದಿ ತಿಳಿದು ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment