ಚಿದಂಬರಂ ತಿಹಾರ್ ಜೈಲು ವಾಸ ಇನ್ನೂ 14 ದಿನ ವಿಸ್ತರಣೆ

ದೆಹಲಿ.ಸೆ.19.ಸೆ. 5ರಿಂದ ತಿಹಾರ್ ಜೈಲಿನಲ್ಲಿರುವ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯು ಸೆ. 19ರಂದು ಮುಕ್ತಾಯಗೊಂಡಿತ್ತು. ಅವರನ್ನು ದೆಹಲಿಯಲ್ಲಿರುವ ವಿಶೇಷ ನ್ಯಾಯಾಲಯದ ಮುಂದೆ ಗುರುವಾರ ಹಾಜರುಪಡಿಸಲಾಗಿತ್ತು.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಚಿದಂಬರಂ ಅವರ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ ಮಾಡಿತ್ತು. ಇದಕ್ಕೆ ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ತೀವ್ರ ವಿರೋಧ ವ್ಯಕ್ತಪಡಿಸಿದರು.
ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಚಿದಂಬರಂ ಅವರು ತಿಹಾರ ಜೈಲಿನಲ್ಲಿದ್ದ ಅವಧಿಯಲ್ಲಿ ತೂಕ ಕಳೆದುಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ಅವರು, ನ್ಯಾಯಾಂಗ ಬಂಧನದ ಅವಧಿಯಲ್ಲಿ ನಿರಂತರ ವೈದ್ಯಕೀಯ ತಪಾಸಣೆ ಮತ್ತು ಸೂಕ್ತ ಆಹಾರಗಳ ಪೂರೈಕೆಯನ್ನು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದರು.

ಎರಡೂ ಕಡೆದ ವಾದ ಆಲಿಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರನ್ನು ಅಕ್ಟೋಬರ್ 3ರವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದರು. ಜತೆಗೆ ಚಿದಂಬರಂ ಅವರ ವೈದ್ಯಕೀಯ ತಪಾಸಣೆಗೆ ಅವಕಾಶ ನೀಡಿದರು.

ಚಿದಂಬರಂ ಅವರ ಜಾಮೀನು ಅರ್ಜಿ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ಸೆ. 23ರಂದು ವಿಚಾರಣೆಗೆ ಬರಲಿದೆ.

Leave a Comment