ಚಿನ್ನ-ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ

ವಾರಾಂತ್ಯದಲ್ಲಿ ಬಂಗಾರ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಬಂಗಾರದ ಬೆಲೆ ಇಂದು ಏರಿಕೆ ಕಂಡಿದೆ. ದೆಹಲಿ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 100 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಬಂಗಾರದ ಬೆಲೆ ಇಂದು 38,670 ರೂಪಾಯಿಯಾಗಿದೆ.

ಬೆಳ್ಳಿ ಬೆಲೆಯಲ್ಲೂ ಶನಿವಾರ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ 200 ರೂಪಾಯಿ ಏರಿಕೆಯೊಂದಿಗೆ ಕೆ.ಜಿ.ಗೆ 47,300 ರೂಪಾಯಿಯಾಗಿದೆ. ಜಾಗತಿಕ ಮಾರುಕಟ್ಟೆ ಲಂಡನ್ ಮತ್ತು ನ್ಯೂಯಾರ್ಕ್ ನಲ್ಲಿ ಶುಕ್ರವಾರ ಚಿನ್ನದ ಬೆಲೆ 1,517.10 ಡಾಲರ್ ಪ್ರತಿ ಔನ್ಸ್ ಆಗಿತ್ತು.

ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಯುಎಸ್ ನಡುವೆ ನಡೆಯುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಹೂಡಿಕೆದಾರರು ಸುರಕ್ಷಿತ ಹೂಡಿಕೆ ಹಳದಿ ಲೋಹಕ್ಕೆ ತಿರುಗಿದ್ದಾರೆ. ಇದು ಬೆಲೆ ಏರಿಕೆಗೆ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಬೆಳ್ಳಿ ಕೂಡ ಜಾಗತಿಕ ಮಾರುಕಟ್ಟೆಯಲ್ಲಿ 0.80 ಡಾಲರ್ ಹೆಚ್ಚಳ ಕಂಡು 17.96 ಡಾಲರ್ ಪ್ರತಿ ಔನ್ಸ್ ಆಗಿತ್ತು.

Leave a Comment