ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿಯಲ್ಲ

ಚಿಕ್ಕಮಗಳೂರು, ಸೆ. ೩- ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕೆಲ ಜಿಲ್ಲೆಗಳಲ್ಲಿ ಮಾತ್ರ ನಡೆದಿದೆ. ಹಾಗಾಗಿ ಈ ಚುನಾವಣೆ ಲೋಕಸಭೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಇಲ್ಲಿನ ಯಗಟಿಯಲ್ಲಿ ಸುದ್ಧಿಗಾರರೊಂದಿಗ ಮಾತನಾಡಿದ ಅವರು ರಾಜ್ಯದಲ್ಲಿ ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಅತಂತ್ರ ಪರಿಸ್ಥಿತಿ ಎದುರಾಗಿದೆ.ಕೋಮುವಾದಿ ಬಿಜೆಪಿಯನ್ನು ದೂರವಿಡುವ ಸಲುವಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದವರು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಬಿಜೆಪಿಗೆ ಅಧಿಕಾರಿ ಸಿಗಬಾರದು. ಅದಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗುವುದೆಂದು ತಿಳಿಸಿದರು.

Leave a Comment