ಚೂರಿಯಿಂದ ಇರಿದು ಬರ್ಬರ ಹತ್ಯೆ

ಮಂಗಳೂರು, ಫೆ.೧೦- ವ್ಯಕ್ತಿಯೊಬ್ಬನ ಮೇಲೆ ರಾಡ್‌ನಿಂದ ಹಲ್ಲೆಗೈದು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ಘಟನೆ ನಡೆದಿದ್ದು, ಕೊಲೆಯಾದವನನ್ನು ಉಮೇಶ್ ಎಂದು ಗುರುತಿಸಲಾಗಿದೆ.
ಉಮೇಶ್ ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಕೆಲದಿನಗಳ ಹಿಂದಷ್ಟೇ ಊರಿಗೆ ಮರಳಿದ್ದರು ಎನ್ನಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ನೆರೆಮನೆಯ ನಿವಾಸಿಗಳಾದ ಅಪ್ಪ ಮತ್ತು ಮಗ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಆರೋಪಿಗಳನ್ನು ಯೋಗೀಶ್ ಮತ್ತು ಜೀವನ್ ಎಂದು ಗುರುತಿಸಲಾಗಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment