ಜನತೆಗೆ ಧನ್ಯವಾದ ಅರ್ಪಿಸಿದ ದರ್ಶನ್

ಬೆಂಗಳೂರು, ಸೆ 30 – ಚಾಲೆಂಜಿಂಗ್ ಸ್ಟಾರ್ ದರ್ಶನ್, ಕರ್ನಾಟಕ ಜನತೆಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

ದರ್ಶನ್, ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ ಇಂದಿಗೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದು, ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಿತ್ತು.

ಈ  ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್,  ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ  ನೂರಾರು ಕಲಾವಿದರು ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು.

Leave a Comment