ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್, ಜೆಡಿಎಸ್

ಬೆಂಗಳೂರು, ಸೆ. ೧೦- ತೈಲ ಬೆಲೆ ಏರಿಕೆಗೆ ಕಾರಣ ಇಡೀ ವಿಶ್ವಕ್ಕೆ ಗೊತ್ತಿದ್ದರೂ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಪಕ್ಷಗಳು ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ.

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನ ಇಂದಿನ ಭಾರತ ಬಂದ್ ಕರೆಗೆ ಪ್ರತಿಕ್ರಿಯಿಸಿರುವ ಅವರು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ವ್ಯವಸ್ಥಾಪಕ ಷಡ್ಯಂತ್ರ ನಡೆಸಿವೆ ಎಂದು ದೂರಿದರು.

ತೈಲ ಬೆಲೆ ಏರಿಕೆಗೆ ಕಾರಣ ಇಡೀ ವಿಶ್ವಕ್ಕೆ ಗೊತ್ತಿದೆ. ಆದರೂ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಬಂದ್ ನಡೆಸುವ ಮೂಲಕ ಜನರ ದಾರಿ ತಪ್ಪಿಸುತ್ತಿವೆ ಎಂದ ಅವರು ಸುದ್ಧಿಗಾರರೊಂದಿಗೆ ಮಾತನಾಡುತ್ತಾ ಹರಿಹಾಯ್ದರು.

Leave a Comment