ಜನವಸತಿ ಪ್ರದೇಶದ ಮೇಲೆ ಬಿದ್ದ ವಿಮಾನ: 97 ಮಂದಿ ಮೃತ್ಯು

ಕರಾಚಿ, ಮೇ ೨೩ ಪಾಕಿಸ್ತಾನ ಇಂಟರ್ ನ್ಯಾಷನಲ್ ಏರ್ಲೈನ್ಸ್ ವಿಮಾನ ಕರಾಚಿ ವಿಮಾನ ನಿಲ್ದಾಣದ ಬಳಿ ಜನವಸತಿ ಪ್ರದೇಶಕ್ಕೆ ಅಪ್ಪಳಿಸಿ ನಿನ್ನೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 97 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಮಾನದಲ್ಲಿ 99 ಪ್ರಯಾಣಿಕರು ಮತ್ತು 8 ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದರು ಎಂದು ಪಿಐಎ ವಕ್ತಾರರು ತಿಳಿಸಿದ್ದಾರೆ. ಪಾಕಿಸ್ತಾನದ ಇಂಟರ್ ನ್ಯಾಷನಲ್ ಏರ್ ಲೈನ್ಸ್ ಏರ್ ಬಸ್ 320 ಪಿಕೆ 8303 ದೇಶೀಯ ವಿಮಾನ ಕರಾಚಿ ವಿಮಾನ ನಿಲ್ದಾಣದ ಸಮೀಪದಲ್ಲಿ, ಮಾಲಿರ್ ಕಂಟೋನ್ಮೆಂಟ್, ಜಿನ್ನಾ ಗಾರ್ಡನ್ ಬಳಿ ಅಪಘಾತಕ್ಕೀಡಾಗಿತ್ತು.

ಕರಾಚಿ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ವಿಮಾನವು ವಸತಿ ಪ್ರದೇಶಕ್ಕೆ ಅಪ್ಪಳಿಸಿತ್ತು.

Leave a Comment