ಜಯಚಾಮರಾಜ ಒಡೆಯರ್ ಶತಮಾನೋತ್ಸವಕ್ಕೆ ರಾಷ್ಟ್ರಪತಿಗಳಿಗೆ  ಆಹ್ವಾನ

ಮೈಸೂರು, ಜೂನ್ 20: ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವಕ್ಕೆ ಪೂರ್ವ ತಯಾರಿ ನಡೆಸುತ್ತಿರುವ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಮುಂದಿನ ತಿಂಗಳು ಜುಲೈ 18ಕ್ಕೆ ಜಯಚಾಮರಾಜ ಒಡೆಯರ್ ಅವರ ಜನ್ಮಶತಮಾನೋತ್ಸವದ ಹಿನ್ನೆಲೆ ಕಾರ್ಯಕ್ರಮ ಆಯೋಜಿಸಲು ಈಗಾಗಲೇ ಪೂರ್ವ ತಯಾರಿ ನಡೆಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ರಾಜವಂಶಸ್ಥರು ಸಿದ್ಧತೆ ನಡೆಸಿದ್ದು, ಪ್ರಮೋದಾದೇವಿ ಒಡೆಯರ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

Leave a Comment