ಜಲಾವೃತವಾದ ಭತ್ತದ ಗದ್ದೆ

ದಾವಣಗೆರೆ, ಆ. 14- ಕಳೆದ ಎರಡು ದಿನಗಳಿಂದ ಎಡೆಬಿಡದೆ ಬಂದ ಮಳೆಗೆ ತುಂಗಾಭದ್ರಾ ನದಿ ಉಕ್ಕಿಹರಿಯುತ್ತಿದೆ. ಇದರಿಂದಾಗಿ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ ಗ್ರಾಮದ ಭತ್ತದ ಗದ್ದೆಗೆ ನೀರು ನುಗ್ಗಿದ ಪರಿಣಾಮ ನೂರಾರು ಎಕರೆ ಜಲಾವೃತಗೊಂಡಿದೆ. ಮಳೆ ಇಲ್ಲದೆ ಚಿಂತಗೀಡಾಗಿದ್ದ ರೈತರೀಗ ಮಳೆಯಿಂದ ಬೆಳೆ ಕಳೆದುಕೊಂಡಿದ್ದಾರೆ. ಗ್ರಾಮದ ನೂರಾರು ಎಕರೆ ಭತ್ತದ ಗದ್ದೆ ಸಂಪೂರ್ಣ ಕೆರೆಯಂತಾಗಿದೆ. ಜಲಾವೃತದಿಂದಾಗಿ ಭತ್ತ ನಾಟಿ ಮಾಡಿದ್ದ ರೈತರು ಕಂಗಾಲಾಗಿದ್ದಾರೆ. ಲಕ್ಷಾಂತರ ರೂ, ನಷ್ಟಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ಗ್ರಾಮದ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

Leave a Comment