ಜಾರ್ಖಂಡ್ ವಿಧಾನಸಭಾ ಚುನಾವಣೆ : ಅಮಿತ್ ಶಾ, ರಾಹುಲ್ ಅಬ್ಬರದ ಪ್ರಚಾರ

ರಾಂಚಿ, ಡಿ 2 – ಜಾರ್ಖಂಡ್ ವಿಧಾನಸಭೆಯ ಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಇಂದು ರಾಜ್ಯದ ಹಲವೆಡೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೂಡ ರಾಜ್ಯದ ಅನೇಕ ಕಡೆ, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಯಾಚನೆ ಮಾಡಲಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರತುಪಡಿಸಿದರೆ ಸ್ಥಳೀಯ ನಾಯಕರಾದ ಬಾಬೂ ಲಾಲ್ ಮೊರಾಂಡಿ, ಸುರೇಶ್ ಮಹತೋ ಅವರುಗಳು ಸಹ ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ.

ಈ ನಡುವೆ ನಾಲ್ಕನೇ ಹಂತದ ಚುನಾವಣೆಗೆ ಉಮೇದುವಾರಿಕೆ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.

ಈಗಾಗಲೇ 230 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ನಾಲ್ಕನೇ ಹಂತದ ಚುನಾವಣೆ ಇದೇ 16 ರಂದು ನಡೆಯಲಿದೆ.

Leave a Comment