ಜಾಹೀರಾತಿಗೆ ದುಂದು ವೆಚ್ಚ ಸಿಎಂ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು, ಆ. ೧೪- ರಾಜ್ಯದಲ್ಲಿ ಭೀಕರ ಮಳೆ ಹಾಗೂ ಪ್ರವಾಹದಿಂದಾಗಿ ಜನ ತತ್ತರಿಸಿ ಹೋಗಿರುವ ಸಂದರ್ಭದಲ್ಲಿ ಮಂತ್ರಿಮಂಡಲ ರಚಿಸದೆ, ಕೆಲಸ ಮಾಡದೆ, ಜಾಹೀರಾತಿಗಾಗಿ ದುಂದು ವೆಚ್ಚ ಮಾಡಿರುವುದು ಜನತೆಗೆ ಮಾಡಿದ ಅಪಮಾನ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ಸಂಬಂಧ ಟ್ವಿಟ್ ಮಾಡಿರುವ ಕಾಂಗ್ರೆಸ್ ಪಕ್ಷ, ನೆರೆಯಿಂದ ಲಕ್ಷಾಂತರ ಮಂದಿ ಸಂಕಷ್ಟದಲ್ಲಿರುವಾಗ ಅವರ ನೋವಿಗೆ ಸ್ಪಂದಿಸಬೇಕಾದ್ದು ಸರ್ಕಾರದ ಕರ್ತವ್ಯ. ಅದನ್ನು ಮಾಡದೆ ಜಾಹೀರಾತಿಗಾಗಿ ದುಂದು ವೆಚ್ಚ ಮಾಡಿರುವುದು ತಿರುಕನ ಶೋಕಿಯಂತಿದೆ ಎಂದು ಆರೋಪಿಸಿದೆ.
ರಾಜ್ಯದಲ್ಲಿ ಸಂಭವಿಸಿದ ನೆರೆ ಪರಿಸ್ಥಿತಿಯನ್ನು ವೀಕ್ಷಿಸಲು ಪ್ರಧಾನಿ ನರೇಂದ್ರಮೋದಿ ಆಗಮಿಸಿಲ್ಲ. ರಾಷ್ಟ್ರೀಯ ವಿಪತ್ತು ಎಂದೂ ಘೋಷಣೆ ಮಾಡಿಲ್ಲ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು 5 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

Leave a Comment