ಜಿಪಂನಲ್ಲಿ ಕೆಡಿಪಿ ಸಭೆ

 

ತಟಸ್ಥಸಂಸ್ಥೆಗೆ ಕಾಮಗಾರಿ ಪರಿಶೀಲನೆ  ಪ್ರಸ್ತಾವನೆ

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ ಜು 11:  ಜಿಪಂ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಪ್ರಮಾಣಪತ್ರ ನೀಡಲು  ತಟಸ್ಥ ಸಂಸ್ಥೆ (ಥರ್ಡಪಾರ್ಟಿ) ಗೆ ಅವಕಾಶ ನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳಿಸಲಾಗುವದು ಎಂದು ಜಿಪಂ ಸಿಇಒ ಡಾ.ರಾಜಾ ಪಿ ಅವರು ಜಿಪಂ ಸಭೆಯಲ್ಲಿ ತಿಳಿಸಿದರು.ಜಿಪಂ ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುವರ್ಣಾ ಎಚ್ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮತ್ತು ವಿಶೇಷ ಅಭಿವೃದ್ಧಿ ಯೋಜನೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ ಕೈಗೆತ್ತಿಕೊಂಡ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವ ಸಂದರ್ಭದಲ್ಲಿ ಈ ವಿಷಯ ಸಭೆಗೆ ತಿಳಿಸಿದರು.

ಜೇವರಗಿ ತಾಲೂಕಿನ ಹೆಗಿನಾಳ ಮತ್ತು ಸೊನ್ನ ಗ್ರಾಮಗಳಲ್ಲಿ ಕೆರೆ ನಿರ್ಮಾಣ ಹೆಸರಲ್ಲಿ ಖೊಟ್ಟಿ ಬಿಲ್ಲು ಸೃಷ್ಟಿಸಿ ಅವ್ಯವಹಾರ ನಡೆಸಲಾಗಿದೆ ಎಂದು ಗೊತ್ತಾಗಿದೆ. ಈ ಬಗ್ಗೆ ಸಭೆಗೆ ಮಾಹಿತಿ ನೀಡಿ ಎಂದು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ಧು ಸಿರಸಗಿ,ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಗೌಡ ಪಾಟೀಲ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಪ್ಪ ಕೂಡಲಗಿ,ಮುಖ್ಯ ಯೋಜನಾಧಿಕಾರಿ  ಪ್ರವೀಣ ಪ್ರಿಯಾ ಡೆವಿಡ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment