ಜಿಲ್ಲಾಡಳಿತದಿಂದ ನಾಳೆ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮೈಸೂರು. ಆ.14- ಜಿಲ್ಲಾಡಳಿತದ ವತಿಯಿಂದ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಾಳೆ ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ನಡೆಯಲಿದೆ.
ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ ಅವರು ಧ್ವಜಾರೋಹಣ ನೆರವೇರಿಸುವರು.
ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ. ಮಹೇಶ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಬಿ. ಭಾಗ್ಯವತಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಯಿಮಾ ಸುಲ್ತಾನ ನಜೀರ್ ಅಹಮದ್, ಲೋಕಸಭಾ ಸದಸ್ಯರುಗಳಾದ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ವಿಧಾನಸಭಾ ಸದಸ್ಯರುಗಳಾದ ಅಡಗೂರು ಹೆಚ್. ವಿಶ್ವನಾಥ್, ಎಸ್.ಎ. ರಾಮದಾಸ್, ಕೆ. ಮಹದೇವ್, ಹರ್ಷವರ್ಧನ್, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಎಲ್. ನಾಗೇಂದ್ರ, ಡಾ|| ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯರುಗಳಾದ ಎಸ್. ನಾಗರಾಜು(ಸಂದೇಶ್ ನಾಗರಾಜ್), ಮರಿತಿಬ್ಬೇಗೌಡ, ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ. ನಾರಾಯಣಸ್ವಾಮಿ, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರಾದ ಇಂದಿರಾ ಮಹೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಕಾಳಮ್ಮ ಕೆಂಪರಾಮಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜಿ.ನಟರಾಜ್, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಎನ್.ಬಿ. ಮಂಜು ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವಿಧಾನಸಭಾ ಸದಸ್ಯರಾದ ಎಲ್. ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಬಿ. ಭಾಗ್ಯವತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಕಲ ಸಿದ್ಧತೆ
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ೭೨ನೇ ಸ್ವಾತಂತ್ರ್ಯ ದಿನಾಚರಣೆಯ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ತುಂತುರು ಮಳೆಯ ನಡುವೆಯೂ ಸಿದ್ಧತಾ ಕಾರ್ಯ ಸಾಗಿದ್ದು, ಮಂಗಳವಾರ ಪೊಲೀಸ್ ಶ್ವಾನದಳ ತಂಡದಿಂದ ಸ್ಥಳ ಪರಿಶೀಲನೆ ನಡೆಸಲಾಯಿತು. ಗಣ್ಯರು ಕೂರಲು ವ್ಯವಸ್ಥಿತ ಆಸನ ವ್ಯವಸ್ಥೆಗಳು ಹಾಗೂ ಕಾರ್ಯಕ್ರಮ ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲು ಏರ್ಪಾಡಾಗಿರುವ ಸಿದ್ಧತೆಗಳನ್ನು ಅಂಮಗೊಳಿಸಲಾಯಿತು.

Leave a Comment