ಜಿಲ್ಲಾಧಿಕಾರಿಗಳ ವಿರುದ್ದ ಹರಿಹಾಯ್ದ ಮಾಜಿ ಸಚಿವರು

ದಾವಣಗೆರೆ.ಮಾ.20- ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 35 ಕೋಟಿ ಅನುದಾನ ಬಿಡುಗಡೆಯಾಗಿ ಮೂರು ವರ್ಷ ಕಳೆದರು ಜಿಲ್ಲಾಡಳಿತ ಯಾವುದೇ ಕ್ರಮಕೈಗೊಳ್ಳದಿರುವುದು ದುರಾದೃಷ್ಟಕರ. ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರ ಜೀತದಾಳಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದೂರಿದರು. ರಾಜಕೀಯದಲ್ಲಿ ಅಧಿಕಾರ ಸ್ಥಿರವಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ. ಆದ್ದರಿಂದ ಯಾವೊಂದು ಪಕ್ಷಕ್ಕೆ ಗುಲಾಮರಾಗದೇ ಪಾರದರ್ಶಕವಾಗಿ ಕೆಲಸ ನಿರ್ವಹಿಸಿ ಎಂದು ಜಿಲ್ಲಾಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ನಡೆಸುತ್ತಿದೆ. ಆಶ್ರಯ ಮನೆಗಳಿಗೆ ಮನೆಕಟ್ಟಲು ಮರಳು ಸಿಗುತ್ತಿಲ್ಲ. ಅಕ್ರಮವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಆದರೆ ಜಿಲ್ಲಾಧಿಕಾರಿಗಳು ತಿಳಿದಿದ್ದರು ಸಹ ಸುಮ್ಮನೆ ಕುಳಿತಿದ್ದಾರೆ. ಕೂಡಲೇ ಮರಳು ಮಾಫಿಯಾ ತಡೆಗಟ್ಟಲು ಕ್ರಮಕೈಗೊಳ್ಳಬೇಕು. ಹಾಗೂ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೂಡಲೇ ಪ್ರಾರಂಭಕ್ಕೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

Leave a Comment