ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ

ದಾವಣಗೆರೆ,ನ. 6 – ದಲಿತರು ರಾಜಕೀಯವಾಗಿ, ಆರ್ಥಿಕವಾಗಿ ಸಮಾಜದಲ್ಲಿ ಸಮಾನತೆಯಿಲ್ಲದೆ ಹಿಂದುಳಿದಿದ್ದೇವೆ ನಾವುಗಳು ಎಚ್ಚೆತ್ತುಕೊಳ್ಳಬೇಕೆಂದು ರಾಜ್ಯ ಎಸ್ಸಿ ಮೋರ್ಚಾದ ಉಪಾಧ್ಯಕ್ಷ ಪ್ರೊ.ಎನ್.ಲಿಂಗಣ್ಣ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿಂದು ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದಲಿತರನ್ನು ಮತಕ್ಕಾಗಿ ಉಪಯೋಗಿಸಿಕೊಂಡರೆ ವಿನಹ. ಅವರ ಅಭಿವೃದ್ದಿಗಾಗಿ ಯಾವುದೇ ಕೆಲಸಗಳನ್ನು ಮಾಡಿಲ್ಲ. ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ದಲಿತರಿಗಾಗಿ ಎಲ್ಲಾ ಸೌಲಭ್ಯಗಳನ್ನುಕೊಟ್ಟಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಎಸ್ಸಿ ಮೋರ್ಚವಿದೆ. ಕಾರ್ಯಕರ್ತರು ತಮ್ಮ ಕರ್ತವ್ಯವನ್ನು ಅರ್ಥ ಮಾಡಿಕೊಂಡು ಬೂತ್ ಮಟ್ಟದಲ್ಲಿ ಜವಾಬ್ದಾರಿಯುತವಾಗಿ ಕೆಲಸಗಳನ್ನು ಮಾಡುವುದರ ಜೊತೆ ಪಕ್ಷದ ಬೆಳವಣಿಗೆಗೆ ಸಹಕಾರವಾಗುತ್ತದೆ.ಪ್ರತಿ ತಾಲ್ಲೂಕುಗಳಲ್ಲಿ ಕಾರ್ಯಕರ್ತರು ಎಚ್ಚೆತ್ತುಕೊಂಡು ಜನರಿಗೆ ಪಕ್ಷದ ಬಗ್ಗೆ ತಿಳುವಳಿಕೆ ನೀಡಬೇಕು. ಪ್ರಧಾನಮಂತ್ರಿ ನರೇಂದ್ರಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ದಲಿತರಿಗಾಗಿ ಸಾಕಷ್ಟು ಸೌಲಭ್ಯಗಳನ್ನು ದೊರಕಿಸಿಕೊಟ್ಟಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದೆ. 8 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಬೇಕೆಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಲೂರು ನಿಂಗರಾಜ್ ಮಾತನಾಡಿ,ಡಾ.ಅಂಬೇಡ್ಕರ್ ಅವರು ಯಾರೊಬ್ಬರ ಸ್ವತ್ತಲ್ಲ. ಎಲ್ಲಾ ವರ್ಗದವರಿಗೂ ಸಂವಿಧಾನ ರಚಿಸಿಕೊಟ್ಟಿದ್ದ ಮಹಾನ್ ವ್ಯಕ್ತಿ. ಬಿಜೆಪಿ ಸರ್ಕಾರ ದಲಿತರ ಏಳಿಗೆಗಾಗಿ ಸಾಕಷ್ಟು ಸೌಲಭ್ಯಗಳು ಜಾರಿಗೆಗೊಳಿಸಿದೆ. ಅವುಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಬಿಜೆಪಿ ಸರ್ಕಾರ ದಲಿತರಿಗೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮ್ಮ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕ ಬಸವರಾಜ್ ನಾಯ್ಕ್, ಹೆಚ್.ಎನ್.ಶಿವಕುಮಾರ್, ಎಲ್.ಡಿ.ಗೋಣೆಪ್ಪ, ಹೆಚ್.ಕೆ.ಬಸವರಾಜ್, ಪ್ರಭುಕಲ್ಬುರ್ಗಿ, ಹನುಮಂತಪ್ಪ, ಜಯಣ್ಣ, ಹೆಚ್.ಆನಂದಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Comment