ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ವಿರುದ್ಧ ಪ್ರಕರಣ

 

ಕಲಬುರಗಿ,ನ.8-ನಗರದ ಗಣೇಶನಗರದಲ್ಲಿರುವ ಪರ್ಯಾಯ ಎಂ.ಎಸ್.ಡಬ್ಲ್ಯೂ ಕಾಲೇಜಿನ ಪ್ರಾಚಾರ್ಯ ಮಹೇಶ ರಾಠೋ‌ಡ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಮತ್ತು ಅಪರ ಪುತ್ರ ಜಿಲ್ಲಾ ಪಂಚಾಯತಿ ಸದಸ್ಯ ರಾಜೇಶ ಗುತ್ತೇದಾರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶನಗರದಲ್ಲಿರುವ ಪರ್ಯಾಯ ಎಂ.ಎಸ್.ಡಬ್ಲ್ಯೂ ಕಾಲೇಜು ಬಳಿಯ ರಸ್ತೆಯಲ್ಲಿ ಕಾರು ನಿಂತಿದ್ದು ಈ ಎಲ್ಲ ಘಟನೆಗೆ ಕಾರಣವೆನ್ನಲಾಗಿದ್ದು, ವಿನಾಕಾರಣ ತಮ್ಮ ಮೇಲೆ ಜಿ.ಪಂ.ಸದಸ್ಯ ರಾಜೇಶ ಗುತ್ತೇದಾರ ಹಲ್ಲೆ ನಡೆಸಿ ಜೀವ ಬೆದಕಿಕೆ ಹಾಕಿದ್ದಾರೆ ಎಂದು ಮಹೇಶ ರಾಠೋಡ್ ದೂರು ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಜಿ.ಪಂ.ಸದಸ್ಯ ರಾಜೇಶ ಗುತ್ತೇದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಎ.ಎಸ್ಪಿ ಲೋಕೇಶ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Comment