ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಹಳ್ಳಿಗಳಿಗೆ ಟ್ಯಾಂಕರ್ ನೀರು ಪೂರೈಕೆಗೆ ಸೂಚನೆ
ರಾಯಚೂರು.ಫೆ.11- ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣಯಾಗದಂತೆ ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೂಚಿಸಿದರು.
ಅವರಿಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆ ಆರಂಭ ಮುನ್ನವೇ, ಗ್ರಾಮೀಣ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಸೂಚಿಸಿದರು. ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಬೇಕೆಂದರು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ನೀರು ಪೂರೈಸುವ ಸಿಬ್ಬಂದಿ ವರ್ಗ ಅನವಶ್ಯಕವಾಗಿ ನೀರು ಪೋಲು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನೀರು ಪೋಲಾಗುವುದನ್ನು ತಡೆಯಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಿಗಾವಹಿಸಬೇಕೆಂದರು.
ವಿವಿಧ ಇಲಾಖೆಯಲ್ಲಿ ಖರ್ಚು ಮಾಡದೇ ಉಳಿದಿರುವ ಅನುದಾದ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕರ ಗಮನಕ್ಕೆ ತಾರದೇ, ಯಾವೊಬ್ಬ ಅಧಿಕಾರಿಯು ಸ್ವಯಂ ನಿರ್ಣಯ ತೆಗೆದುಕೊಂಡಾಗ ಅಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಜಿ.ಪಂ. ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಎಚ್ಚರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಆರ್.ನಾಗರಾಜ್ ಮಾತನಾಡಿ, ಮಾತೃಪೂರ್ಣ ಯೊಜನೆಯಡಿಯಲ್ಲಿ 8 ಅಥವಾ 9 ತಿಂಗಳ ಗರ್ಭಿಣಿಯರು ಅಂಗನವಾಡಿಗೆ ಬಾರದ ಸಮಯದಲ್ಲಿ ಅವರ ಕುಟುಂಬಸ್ಥರ ಮೂಲಕ ಆಹಾರವನ್ನು ತೆಗೆದುಕೊಂಡು ಹೋಗುವಂತೆ ಅವಕಾಶ ನೀಡಿ, ಅವರಿಂದ ದಾಖಲಾತಿ ಪುಸ್ತಕದಲ್ಲಿ ಸಹಿಯನ್ನು ಪಡೆಯಲಾಗುತ್ತದೆ.
ಜಿಲ್ಲೆಯಲ್ಲಿ ಅಪೌಷ್ಠಿಕತೆ ಕೊರತೆಯಿಂದ ಕಳೆದ ತಿಂಗಳು 1318, ಈ ತಿಂಗಳು 1268 ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ. ಒಟ್ಟಾರೆ ಅಪೌಷ್ಠಿಕತೆಯಿಂದ ಬಳಲುತ್ತಿವ ಮಕ್ಕಳ ಸಂಖ್ಯೆ 70 ಇಳಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಅಪೌಷ್ಠಿಕತೆ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಅಕ್ಕಿಯನ್ನು ಪೂರೈಕೆ ಮಾಡುತ್ತಿರುವ ಏಜೆನ್ಸಿಯು ಪ್ರಮಾಣ ಮಟ್ಟದಲ್ಲಿ ಕಡಿಮೆಯಾಗುತ್ತಿದೆ. ಇದನ್ನು ಸರಿಪಡಿಸಬೇಕೆಂದು ಜಿ.ಪಂ. ಅಧ್ಯಕ್ಷರು ಮಹಿಳಾ ಮಕ್ಕಳ ಕಲ್ಯಾಣಧಿಕಾರಿಗೆ ತಿಳಿಸಿದರು. ಮಾನ್ವಿ ತಾಲೂಕಿನಲ್ಲಿ ಕೆಲವೊಂದು ಹಾಸ್ಟೆಲ್‌ಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ತಯಾರಿಸದೇ ಅಡುಗೆ ಕೋಣೆಯ ಸುತ್ತ-ಮುತ್ತಲು ಸ್ವಚ್ಛತೆ ಇಲ್ಲದೇ ಅಡುಗೆ ಸಹಾಯಕರು ಕಾರ್ಯ ನಿರ್ವಹಿಸುತ್ತಿದ್ದು, ಅದನ್ನು ಸರಿಪಡಿಸುವಂತೆ ಸಮಾಜ ಕಲ್ಯಾಣ ಅಧಿಕಾರಿಗೆ ಜಿ.ಪಂ. ಅಧ್ಯಕ್ಷೆ ಸೂಚಿಸಿದಾಗ 11 ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ತಾಲೂಕಾಧಿಕಾರಿ ಹಾಗೂ ಹಾಸ್ಟೆಲ್‌ಗಳಿಗೆ ಯಾವೊಬ್ಬ ವಾರ್ಡನ್‌‌ಗಳು ಇಲ್ಲದೇ, ಅಲ್ಲಿರುವ ಅಡುಗೆ ಸಹಾಯಕರು ಹಾಸ್ಟೆಲ್‌ನ ಮೇಲುಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆಂದು ಸಭೆಗೆ ಸಮಾಜ ಕಲ್ಯಾಣ ಅಧಿಕಾರಿ ಪ್ರಶಾಂತ ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷೆ ಗೀತಾ ಕರಿಯಪ್ಪ ವಜ್ಜಲ್, ಜಿ.ಪಂ. ಯೋಜನಾಧಿಕಾರಿ ಡಾ.ಟಿ.ರೋಣಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment