ಜಿಲ್ಲಾ ವಿತರಕರ ಸಂಘದಿಂದ ಪ್ರತಿಭಟನೆ

ಮೈಸೂರು.ಫೆ.28. ದೇಶಾದ್ಯಂತ ಚಾಲ್ತಿಯಲ್ಲಿರುವ ಎಲ್ಲಾ ರೀತಿಯ ಆನ್ ಲೈನ್ ವ್ಯಾಪಾರವನ್ನು ಕೂಡಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ವಿತರಕರ ಸಂಘದ ಕಾರ್ಯಕರ್ತರು ಇಂದು ಬೆಳಿಗ್ಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ಸಂಧರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರು ದೇಶಾದ್ಯಂತ ಸಧೃಢಸ್ಥಿತಿಯಲ್ಲಿರುವ ಬಂಡವಾಳ ಷಾಹಿ ಕಂಪನಿಗಳು ತಮ್ಮ ಪದಾರ್ಥಗಳನ್ನು ಮಾರಾಟ ಮಾಡಲು ಆನ್ ಲೈನ್ ವ್ಯವಸ್ಥೆಯನ್ನು ಬಳಸಿ ಗ್ರಾಹಕರಿಗೆ ವಿವಿಧ ರೀತಿಯ ಆಸೆ. ಆಮಿಷಗಳನ್ನು ಒಡ್ಡುತ್ತಿವೆ. ಇದಕ್ಕೆ ತಕ್ಕಂತೆ ಗ್ರಾಹಕರೂ ಸಹಾ ಸ್ಪಂದಿಸುತ್ತಿರುವುದರಿಂದ ವ್ಯಾಪಾರವನ್ನೇ ನಂಬಿಕೊಂಡಿರುವ ಸ್ಥಳೀಯ ವ್ಯಾಪಾರಿಗಳಿಗೆ ಬಹಳ ಪ್ರಮಾಣದಲ್ಲಿ ನಷ್ಟ ಆಗುತ್ತಿದೆ. ಆದ ಕಾರಣ ಈ ಆನ್ ಲೈನ್ ವ್ಯಾಪಾರವನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಆನ್ ಲೈನ್ ವ್ಯಾಪಾರದ ಬಗ್ಗೆ ತಮಗೆ ಆಗುತ್ತಿರುವ ತೊಂದರೆಗಳನ್ನೆಗೊಂಡ ಮುಖ್ಯಾಂಶಗಳ ಮನವಿ ಪತ್ರವನ್ನು
ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವ ಸಲುವಾಗಿ ಜಿಲ್ಲಾ ವಿತರಕರ ಸಂಘದ ಕಾರ್ಯಕರ್ತರು ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಹಾದು ಜಿಲ್ಲಾಧಿಕಾರಿ ಕಛೇರಿಯನ್ನು ತಲುಪಿತು.

Leave a Comment