ಜಿಲ್ಲೆಯ 2.03 ಲಕ್ಷ ರೈತರು ಕಿಸಾನ್ ಸಮ್ಮಾನ್ ಯೋಜನೆಯಡಿ

* ಜು.25ರವರೆಗೆ ಅವಧಿ ವಿಸ್ತರಣೆ : ಆನ್ ಲೈನ್ ನೋಂದಣಿಗೂ ಅವಕಾಶ
ರಾಯಚೂರು.ಜು.16- ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿವರೆಗೆ 2.03 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ಅವಧಿ ಜು.25ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ರೈತರು ಸಂಪೂರ್ಣ ಮಾಹಿತಿಯೊಂದಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೋರಿದ್ದಾರೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಲಾಗಿದೆ.
ದೇವದುರ್ಗ ತಾಲೂಕಿನಲ್ಲಿ 30,299 ರೈತರು ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಸರು ದಾಖಲಿಸಿಕೊಂಡಿದ್ದಾರೆ. ಲಿಂಗಸೂಗೂರು ತಾಲೂಕಿನಲ್ಲಿ 28,308, ಮಸ್ಕಿ ಕ್ಷೇತ್ರದಲ್ಲಿ 27,124, ರಾಯಚೂರು ತಾಲೂಕಿನಲ್ಲಿ 35,832, ಸಿಂಧನೂರು ತಾಲೂಕಿನಲ್ಲಿ 38,315, ಮಾನ್ವಿ ತಾಲೂಕಿನಲ್ಲಿ 23,070, ಸಿರವಾರ ತಾಲೂಕಿನಲ್ಲಿ 20,092 ರೈತರು ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ.
ಜಿಲ್ಲೆಯ ಎಲ್ಲಾ ರೈತರಿಗೆ ಈ ಯೋಜನೆ ಲಾಭ ದೊರೆಕಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನೋಂದಣಿ ಅವಧಿ ವಿಸ್ತರಿಸಿದೆ. ಈ ತಿಂಗಳು 25 ರವರೆಗೂ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ರೈತರು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ. ರೈತರು ಸ್ವತಃ `FRUITS, PM KISAN WEBSITE` ಮಾಹಿತಿ ದಾಖಲಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ರೈತರು ತಾವೇ ಈ ಯೋಜನೆ ಲಾಭ ಪಡೆದುಕೊಳ್ಳಬಹುದಾಗಿದೆ.

Leave a Comment