ಜುಲೈ ಎರಡನೇ ವಾರದಲ್ಲಿ ಪಿ ಯು ಸಿ ಮತ್ತು ಜುಲೈ 31 ರೊಳಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮೈಸೂರು, ಮೇ.29- ಜುಲೈ ಎರಡನೇ ವಾರ ಪಿಯುಸಿ ಫಲಿತಾಂಶ ಹಾಗೂ ಜುಲೈ 31 ರ ರೊಳಗೆ ಎಸ್ಎಸ್ಎಲ್ಸಿ ಫಲಿತಾಂಶಪ್ರಕಟಿಸಲಾಗುವುದು ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ

ಇಂದು ಮೈಸೂರು, ಮಂಡ್ಯ ಹಾಗೂ ಮಡಿಕೇರಿಯ ಶಿಕ್ಷಣಾಧಿಕಾರಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಸ್ಎಸ್ಎಲ್ಸಿ ಪರೀಕ್ಷೆ ಜುಲೈ 4 ರಂದು ಮುಗಿಯಲಿದೆ . ಈ ಪರೀಕ್ಷೆ ಮುಗಿದ 15 ದಿನಕ್ಕೆ ಪುನಃ ಕಾರಣಾಂತರಗಳಿಂದ ಪರೀಕ್ಷೆಗೆ ಹಾಜರಾಗದವರು ಮತ್ತು ಅನುತ್ತೀರ್ಣ ಆದವರಿಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನುನಡೆಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಶೈಕ್ಷಣಿಕ ವರ್ಷ ಯಾವಾಗ ಆರಂಭವಾಗಬೇಕು ಎಂಬ ಬಗ್ಗೆ ಕೇಂದ್ರದಿಂದ ಮಾರ್ಗ ಸೂಚಿ ಬಂದ ನಂತರತೀರ್ಮಾನಕೈಗೊಳ್ಳಲಾಗುವುದು.ಎಂದರು.

ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ 7ಶಾಲಾ-ಕಾಲೇಜುಗಳಲ್ಲಿ ಶುಲ್ಕವನ್ನು ಹೆಚ್ಚಿಸಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ 8,48,500 ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು. ಜೊತೆಗೆ ಪರೀಕ್ಷಾ ಕೊಠಡಿಗಳಲ್ಲಿ 24 ವಿದ್ಯಾರ್ಥಿಗಳಿಗೆ ಬದಲಾಗಿ 18 ವಿದ್ಯಾರ್ಥಿಗಳನ್ನು ಒಂದು ಕೊಠಡಿಯಲ್ಲಿ ಸಾಮಾಜಿಕ ಅಂತರದಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುವುದು ಎಂದರು. ಈ ಬಾರಿ ಸುರಕ್ಷತೆ ಹಾಗೂ ಆತ್ಮವಿಶ್ವಾಸದ ಪರಿಕಲ್ಪನೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದರು.

Share

Leave a Comment