ಜುಲೈ 15 ರಂದು ಬಿಜೆಪಿ ಸೇರಲಿರುವ ಅಲ್ಪೇಶ್ ಠಾಕೂರ್

ಅಹ್ಮದಾಬಾದ್, ಜುಲೈ 12: ರಾಜ್ಯ ಸಭೆ ಉಪಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಗುಜರಾತ್ ನ ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಅವರು ಜುಲೈ 15 ರಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.

ಗುಜರಾತಿನ ರಾಧಾನ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಠಾಕೂರ್ ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದರು. ನಂತರ ಕಾಂಗ್ರೆಸ್ ಸೇರಿದ್ದ ಅವರು ಪಕ್ಷದಲ್ಲಿನ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿ ಏಪ್ರಿಲ್ ತಿಂಗಳಿನಲ್ಲಿಯೇ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವವು ಸಾಧಿಸಿರುವುರಿಂದ ತೆರವಾದ ಗುಜರಾತಿನ ಎರಡು ರಾಜ್ಯ ಸಭಾ ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಅಲ್ಪೇಶ್ ಠಾಕೂರ್ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ನಂತರ ಕಾಂಗ್ರೆಸ್ ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದರು. ಠಾಕೂರ್ ಅವರೊಂದಿಗೆ ಅವರ ಆಪ್ತ ಧಾವಲ್ ಸಿನ್ಹಾ ಅವರೂ ರಾಜೀನಾಮೆ ನೀಡಿದ್ದಾರೆ.

ಅವರ ಕ್ಷೇತ್ರಗಳಿಗೆ ನಡೆವ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Comment