ಜು. 1 ರಿಂದ ಲಿಂಗಾಯಿತದ ಅರಿವು ಕಾರ್ಯಕ್ರಮ

ದಾವಣಗೆರೆ, ಜೂ. 13 – ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಬೇಕು ಕೂಡಲೇ ಕೇಂದ್ರ ಸರ್ಕಾರ ತಡ ಮಾಡದೆ ಶಿಫಾರಸ್ಸುಗೊಳಿಸಬೇಕು ಎಂದು ಜಾಗತೀಕ ಲಿಂಗಾಯತ ಮಹಾಸಭಾ ಒತ್ತಾಯಿಸಿದೆ.
ಸುದ್ದಿಗೋಷ್ಟಿಯಲ್ಲಿಂದು ಈ ಬಗ್ಗೆ ಜಿಲ್ಲಾಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಶಿಫಾರಸ್ಸನ್ನು ಯಥಾವತ್ತಾಗಿ ಅಂಗೀಕರಿಸಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಬೇಕು ಎಂದರು. ಕಳೆದ ಕೆಲ ದಿನಗಳಿಂದ ಕೇಂದ್ರದಿಂದ ಕಡತ ವಾಪಾಸ್ ಬಂದಿದೆ ಎಂಬ ಸುದ್ದಿ ಹರಡುತ್ತಿದೆ. ಇದು ಸತ್ಯವಲ್ಲ. ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡುವ ನಿರೀಕ್ಷೆ ಇದೆ. ಈ ಬಗ್ಗೆ ಸಮಾಜಬಾಂಧವರಲ್ಲಿ ಜಾಗೃತಿ ಮೂಡಿಸಲು ಜುಲೈ 1 ರಿಂದ ಲಿಂಗಾಯತದ ಅರಿವು ಕಾರ್ಯಕ್ರಮವನ್ನು ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದಲ್ಲಿ ಮೂಡಿಸಲಾಗುವುದು. ಜಿಲ್ಲೆಯಾದ್ಯಂತ ಸಂಚರಿಸಿ ಅರಿವು ಮೂಡಿಸಲಿದ್ದೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಮಹಾಂತೇಶ್ ಅಗಡಿ, ಹುಚ್ಚಪ್ಪ ಮಾಸ್ತರ್, ಬಾಡದ ಆನಂದರಾಜ್, ವೀಣಾ ಮಂಜುನಾಥ್, ದೇವಿಗೆರೆ ವೀರಭದ್ರಪ್ಪ ಇದ್ದರು.

Leave a Comment