ಜು.29 ಕ್ಕೆ ಜಿಲ್ಲಾಧಿಕಾರಿಗಳ ಜೊತೆ ಸಂವಾದ

ಬಳ್ಳಾರಿ, ಜು.25- ವ್ಯಾಪಾರ ಮತ್ತು ಕೈಗಾರಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ಸಮಸ್ಯೆ ಅಥವಾ ಬೇಡಿಕೆಗಳ ಕುರಿತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜು.29 ರಂದು ಬೆಳಿಗ್ಗೆ 10.30 ಕ್ಕೆ ನಗರದ ಬಿಡಿಎಎ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್ .ನಕುಲ್ ಅವರೊಂದಿಗೆ ಹಮ್ಮಿಕೊಂಡಿದೆ.

ಅಂದು ಜಿಲ್ಲಾಧಿಕಾರಿಗಳು ಜಿಲ್ಲಾಮಟ್ಟದ ಅಧಿಕಾರಿಳೊಂದಿಗೆ ಆಗಮಿಸಿ ತಮ್ಮ ಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಿ ರಾಜ್ಯಮಟ್ಟದಲ್ಲಿ ಸರ್ಕಾರದಿಂದ ಮಂಜೂರಾತಿ ಮಾಡಿಸಲು ಶಿಫಾರಸ್ಸು ಮಾಡಲಿದ್ದಾರೆ.

ಅದಕ್ಕಾಗಿ ನಗರ ಉದ್ದಿಮೆದಾರರು ತಮ್ಮ ಸಮಸ್ಯೆಗಳ ಬಗ್ಗೆ ಮುಂಚಿತವಾಗಿ ಸಂಸ್ಥೆಗೆ ಲಿಖಿತ ರೂಪದಲ್ಲಿ ನೀಡಬೇಕೆಂದು, ಸಂಸ್ಥೆಯ ಅಧ್ಯಕ್ಷ ಡಾ.ಡಿ.ಎಲ್. ರಮೇಶಗೋಪಾಲ್ ಕೋರಿದ್ದಾರೆ.

Leave a Comment