ಜೂನ್ 13ಕ್ಕೆ ಸಮಾಜಿಕ ಸಮಾನತೆಗಾಗಿ ಸಂಘರ್ಷ ಸಮಾವೇಶ

ಬೆಂಗಳೂರು, ಜೂ 8 – ದಲಿತ ಚೇತನ ಪ್ರೊ.ಬಿ.ಕೃಷ್ಣಪ್ಪನವರ 81ನೇ ಜನ್ಮದಿನದ ಅಂಗವಾಗಿ ಜೂನ್ 13 ರಂದು ‘ಸಮಾಜಿಕ ಸಮಾನತೆಗಾಗಿ ಸಂಘರ್ಷ ಸಮಾವೇಶ’ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘರ್ಷ ಸಮಾವೇಶವನ್ನು ಜೂನ್ 13 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಸಾಹಿತಿ ಹಾಗೂ ಪ್ರಗತಿಪರ ಚಿಂತಕ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕೃಷ್ಣಪ್ಪನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಚಿವ ಎಚ್. ಆಂಜನೇಯ, ಪ್ರೊ.ಕೃಷ್ಣಪ್ಪ ಟ್ರಸ್ಟ್ ಹಾಗೂ ರಾಜ್ಯ ಸಮಿತಿ ಸದಸ್ಯೆ ಇಂದಿರಾ ಕೃಷ್ಣಪ್ಪ, ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Comment