ಜೂ.16 ಉಚಿತ ಯೋಗ ಪ್ರಾಣಾಯಾಮ ಶಿಬಿರ

ರಾಯಚೂರು.ಜೂ.13- ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಉಚಿತ ಯೋಗ, ಪ್ರಾಣಾಯಾಮ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆಂದು ಪತಾಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ವಿಠೋಬ ರಾವ್ ತಿಳಿಸಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಜೂ. 16 ರಿಂದ 21 ರವರೆಗೆ ನಗರದ ಎಲ್‌ವಿಡಿ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 5.30 ರಿಂದ 7 ರವರೆಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈಲೂರ ಶಂಕರ ರಾಮ ಅವರು ಯೋಗ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಯೋಗದಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುವುದು ಹಾಗೂ ಮನಸ್ಸು ಶುದ್ಧಿಯಾಗಿ ಧನಾತ್ಮಕ ವಿಚಾರಗಳನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮಿತಿಯೂ ಹಳ್ಳಿಗಳಲ್ಲಿ ಉಚಿತ ಯೋಗ ಶಿಬಿರಗಳನ್ನು ನಡೆಸಿಕೊಂಡು ಬಂದಿದೆ.
ಈ ಸಂದರ್ಭದಲ್ಲಿ ಬ್ರಹ್ಮ ಗಣೇಶ, ಅಂಜನಾ ಹುಂಪಳಿ, ರಾಜಶೇಖರ, ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment