ಜೆಎನ್‌ಯು ಶುಲ್ಕ ಹೆಚ್ಚಳ ವಿರೋಧಿಸಿ ಎಸ್ಎಫ್‌ಐ ಪ್ರತಿಭಟನೆ

ರಾಯಚೂರು.ನ.21- ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಹೆಚ್ಚಿಸಿರುವ ವಿದ್ಯಾರ್ಥಿಗಳ ಶುಲ್ಕ ವಿರೋಧಿಸಿ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್‌ಐ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಅವರಿಂದು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಕಳೆದ 5 ವರ್ಷಗಳಿಂದ ಕೇಂದ್ರ ಸರಕಾರವು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಹಸ್ತ ಕ್ಷೇಪ ಹೆಚ್ಚದ ಕಾರಣ ಕಲಿಕೆ ವಾತಾವರಣ ಹದಗೆಟ್ಟಿದೆ. ಕೇಂದ್ರ ಸರ್ಕಾರ ಇತ್ತೀಚಿಗೆ ಏಕಾಏಕಿ ಶುಲ್ಕವನ್ನು ಹೆಚ್ಚಳ ಮಾಡಲು ಮುಂದಾಗಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವಾಗ ವಿದ್ಯಾರ್ಥಿಗಳ ಮೇಲೆ ಲಾಟಿ ಚಾರ್ಚ್ ಮಾಡಿ ವಿದ್ಯಾರ್ಥಿ ಮುಖಂಡರನ್ನು ಬಂಧಿಸಿ ಹೋರಾಟವನ್ನು ಹತ್ತಿಕ್ಕುವ  ಕೆಲಸ ಮಾಡುತ್ತಿರುವುದು ಖಂಡನೀಯವಾಗಿದೆಂದರು.
ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸಹಾಯ ಧನವು ಹಾಸ್ಟೆಲ್ ಶುಲ್ಕ ಕಟ್ಟಲು ವಿದ್ಯಾರ್ಥಿ ವೇತನ ಹಾಗೂ ಪುಸ್ತಕ ಖರೀದಿಸಲು, ಕಾರ್ಯಕ್ಷೇತ್ರಕ್ಕೆ ತೆರಳಲು ಹಣ ಸಾಕಾಗುವುದಿಲ್ಲ. ಜೆಎನ್‌ಯುನ ಶುಲ್ಕ ಹೆಚ್ಚಳ ಮಾಡಬೇಡಿ ಎಂದು ವಿದ್ಯಾರ್ಥಿಗಳು ಕೇಳಿದರೆ. ತೆರಿಗೆ ಹಣದ ಬಳಕೆ ಬಗ್ಗೆ ಕೇಂದ್ರ ಸರ್ಕಾರ ಮಾತನಾಡುತ್ತಿದೆ. ಆದರೆ ದೊಡ್ಡ ಉದ್ಯಮಗಳಿಗೆ, ಕಾರ್ಪೋರೇಟ್ ಕಂಪನಿಗಳಿಗೆ 12 ಲಕ್ಷ ರೂ. ತೆರಿಗೆ ಮತ್ತು ಸಾಲ ಮನ್ನಾ ಮಾಡಲಾಗಿದೆಂದು ದೂರಿದರು.
ಕೇಂದ್ರ ಸರ್ಕಾರದ ಬೂಟಾಟಿಕೆ ಕೆಲಸ ನಿಲ್ಲಿಸಬೇಕು ಹೆಚ್ಚಿಸುವ ಶುಲ್ಕವನ್ನು ಹಿಂಪಡೆದು ಹಳೆ ಶುಲ್ಕ ಪದ್ಧತಿಯನ್ನು ಮುಂದುವರೆಸಬೇಕು. ಬಂಧಿಸಿರುವ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಲಿಂಗರಾಜ, ಬಸವರಾಜ, ಲಕ್ಷ್ಮಣ,ಶಿವಮೂರ್ತಿ, ಚಿದಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment