ಜೆಡಿಎಸ್‌ನಿಂದ ಜಿಟಿಡಿ ದೂರ

ಬೆಂಗಳೂರು, ಸೆ ೯- ಜೆಡಿಎಸ್ ಪಕ್ಷ ಮತ್ತು ನಾಯಕರಿಂದ ವೈಯಕ್ತಿಕವಾಗಿ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೇ ದೂರ ಉಳಿದಿದ್ದೇನೆ ಎಂದು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ಹೇಳಿದ್ದಾರೆ.

ಜೆಡಿಎಸ್ ಪಕ್ಷದಿಂದ ದೂರ ಉಳಿದಿದ್ದರೂ ಸದ್ಯಕ್ಕೆ ಬಿಜೆಪಿ ಸೇರುವ ಯಾವುದೇ ಉದ್ದೇಶವಿಲ್ಲ ಸಮಯ ಬಂದಾಗ ಎಲ್ಲವೂ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲಱ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠರಿಂದ ಹಲವು ವಿಷಯಗಳಲ್ಲಿ ಬೇಸರವಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಚಟುವಟಿಕೆಗಳಿಂದ ತಟಸ್ಥನಾಗಿ ಉಳಿದಿದ್ದೇನೆ ಎಂದರು.

ಸದ್ಯಕ್ಕೆ ಬಿಜೆಪಿ ಸೇರುವುದಿಲ್ಲ. ಈ ಬಗ್ಗೆ ಮುಂದಿನ ಮೂರು ವರೇ ವರ್ಷ ನಾನು ಏನನ್ನು ಹೇಳುವುದಿಲ್ಲ. ಕ್ಷೇತ್ರದ ಅಭಿವೃದ್ಧಿ ಕೆಲಸ ಗಳಾಗಬೇಕಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ರಾಜಕೀಯ ವಿಷಯಗಳ ಕುರಿತು ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿಗೆ ಬನ್ನಿ ಎಂದು ಆಹ್ವಾನಿಸಿಲ್ಲ. ತಾವು ಕೂಡ ಬಿಜೆಪಿ ಸೇರುತ್ತೇನೆ ಹೇಳಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು. ತಮ್ಮ ಪುತ್ರನನ್ನು ಹುಣಸೂರು ವಿಧಾನಸಭೆ ಉಪ ಚುನಾವಣೆಯಿಂದ ಕಣಕ್ಕಿಳಿಸುವ ಯಾವುದೇ ಉದ್ದೇಶವಿಲ್ಲ. ಈ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವರಾಗಿರುವ ವಿ.ಸೋಮಣ್ಣ ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ವಿರುದ್ಧ ಹರಿಹಾಯ್ದಿದ ಜಿ.ಟಿ.ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ಕುತೂಹಲ ಕೆರಳಿಸಿದೆ.

Leave a Comment